ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಫೆ.7ರಂದು ಪಂಚಾಯತ್ ವಠಾರದಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಿವ ರುದ್ರಪ್ಪ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.
ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.
ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ವಸಂತಿ, ಪಂಚಾಯತ್ ಸದಸ್ಯರುಗಳಾದ ಸಂತೋಷ್ ಕುಮಾರ್ ಜೈನ್, ರಿಚಾರ್ಡ್ ಗೋವಿಯಸ್, ಹಾಮದ್ ಬಾವ, ಅಶೋಕ್ ಸಪಲ್ಯ, ಶ್ರೀಮತಿ ಮೀನಾಕ್ಷಿ, ಯೋಗೀಶ್ ಕುಮಾರ್ ಡಿ.ಪಿ, ಕೃಷ್ಣಪ್ಪ, ಹರೀಶ್ ಕುಮಾರ್, ಶ್ರೀಮತಿ ವಿನೋದ, ಕು. ಶಕುಂತಲಳ, ಶ್ರೀಮತಿ ಗಾಯತ್ರಿ, ಶ್ರೀಮತಿ ವನಜಾಕ್ಷಿ, ಶ್ರೀಮತಿ ಕವಿತಾ, ಶ್ರೀಮತಿ ಸುಮತಿ ಪಿ, ಶ್ರೀಮತಿ ಶುಭ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ್ ಅನುಪಾಲನ ವರದಿ, ಸಿಬ್ಬಂದಿ ಸುನಿಲ್ ವಾರ್ಡ್ ಸಭೆಯ ಪ್ರಸ್ತಾವನೆಗಳನ್ನು ವಾಚಿಸಿದರು.