24.4 C
ಪುತ್ತೂರು, ಬೆಳ್ತಂಗಡಿ
April 19, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿತ್ತು.ಬಳಿಕ ಈ ಪ್ರಕರಣದ ವಿರುದ್ಧ ಲಾರಿ ಚಾಲಕ ಚಾರ್ಮಾಡಿ ಸಿದ್ದಿಕ್(40) ಹೈಕೋರ್ಟ್ ವರೆಗೆ ಅಪೀಲು ಹೋಗಿದ್ದು ಅಲ್ಲಿ ಕೂಡ ಬೆಳ್ತಂಗಡಿ ನ್ಯಾಯಾಲಯ ತೀರ್ಪನ್ನು ಎತ್ತಿ ಹಿಡಿದು ಶಿಕ್ಷೆ ಖಾಯಂ ಮಾಡಿತ್ತು ಬಳಿಕ ಲಾರಿ ಚಾಲಕ ಆರೋಪಿ ತಲೆಮರೆಸಿಕೊಂಡಿದ್ದು. ಇದೀಗ ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಪ್ರಕರಣ 117/2006 ಕಲಂ, 279, 304 (ಎ) ಸುಮಾರು 19 ವರ್ಷದ ಹಿಂದಿನ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಚಾರ್ಮಾಡಿ ಮಸೀದಿಯ ಅಧ್ಯಕ್ಷನಾಗಿರುವ ಸಿದ್ದಿಕ್(40) ಎಂಬಾತನನ್ನು ಫೆ.6 ರಂದು ಬಂಟ್ವಾಳ ಪೊಲೀಸ್ ಉಪ ಅಧಿಕ್ಷಕರು ವಿಜಯ್ ಪ್ರಸಾದ್ ರವರ ನಿರ್ದೇಶನದಂತೆ, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ ಮತ್ತು ಯಲ್ಲಾಪ್ಪ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ , ಚರಣ್, ದರೇಶ್ ರವರು ಬಂಧಿಸಿ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು.‌ನ್ಯಾಯಾಲಯ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದಾರೆ.

Related posts

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!