ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹೈಸ್ಕೂಲ್ ಗೇರುಕಟ್ಟೆ ಇಲ್ಲಿ ನಡೆಯುತ್ತಿದ್ದು ಈ ವಾರ್ಷಿಕ ವಿಶೇಷ ಶಿಬಿರಕ್ಕೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.
![](https://suddiudaya.com/wp-content/uploads/2025/02/blt-2.jpg)
ಈ ವೇಳೆ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಬಿ ಸೋಮಶೇಖರ ಶೆಟ್ಟಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಅನುಭವದ ಮಾತುಗಳ ಮೂಲಕ ಮಾರ್ಗದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಸರಕಾರಿ ಪ್ರೌಢಶಾಲೆ ಗೇರುಕಟ್ಟೆ ಇದರ ಉಪ ಪ್ರಾಂಶುಪಾಲರಾದ ಶ್ರೀಮತಿ ಈಶ್ವರಿ, ದೈಹಿಕ ನಿರ್ದೇಶಕರಾದ ಅಜಿತ್ ಕುಮಾರ್ ಕೊಕ್ರಾಡಿ ಮತ್ತು ಶಾಲೆಯ ಅಧ್ಯಾಪಕ ವೃಂದ ಜೊತೆಗೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ ಮತ್ತು ಉಪ ಯೋಜನಾಧಿಕಾರಿಗಳಾದ ಲೋಹಿತ್ ಮತ್ತು ಶ್ರೀಮತಿ ಪುಷ್ಪಲತಾ ಹಾಜರಿದ್ದರು.