26.7 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಾಡುಹಂದಿಯನ್ನು ಯಾವುದೋ ಆಯುಧಗಳಿಂದ ದಾಳಿ ಮಾಡಿದ ಪ್ರಕರಣ ಸಂಬಂಧ ವೈದ್ಯರ ವರದಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ತೋಟದಲ್ಲಿ ಒಂದು ವರ್ಷ ಪ್ರಾಯದ 26 ಕೆ‌.ಜಿ ತೂಕದ ಹೆಣ್ಣು ಕಾಡುಹಂದಿಯನ್ನು ಜ.23 ರಂದು ಜಾನು ಗೌಡ ಎಂಬಾತ ಆಯುಧದಿಂದ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದು. ಈ ಘಟನೆ ಬಗ್ಗೆ ಸ್ಥಳೀಯರು ಬೆಳ್ತಂಗಡಿ ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಜ.23 ರಂದು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಬೆಳ್ತಂಗಡಿ ಗೋ ಮತ್ತು ಪಶು ಇಲಾಖೆಯ ವೈದ್ಯರಿಂದ ಶವ ಪರೀಕ್ಷೆ ಮಾಡಿಸಿ ಯಾವ ವಸ್ತುವಿನಿಂದ ಗಾಯಗೊಳಿಸಿ ಸಾಯಿಸಲಾಗಿದೆ ಎಂದು ವರದಿ ಕೇಳಿದ್ದರು. ಈ ಬಗ್ಗೆ ಪಶು ವೈದ್ಯರು ಜ.26 ರಂದು ಅಯುಧದಿಂದ ಗಾಯಗೊಳಿಸಿ ಸಾಯಿಸಿರುವುದಾಗಿ ವರದಿ ನೀಡಿದ್ದು ಅದರಂತೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಆರೋಪಿ ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ ಮಗ ಜಾನು ಗೌಡ ವಿರುದ್ಧ ಜ.27 ರಂದು ಅರಣ್ಯ ಕಾಯ್ದೆ 9,39,51 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya
error: Content is protected !!