ಪೆರ್ಲ : ಸ. ಹಿ. ಪ್ರಾ. ಶಾಲೆ ಮುಂಡತ್ತೊಡಿ – ಪೆರ್ಲ ಇಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಫೆ.8ರಂದು ಹಮ್ಮಿಕೊಳ್ಳಲಾಯಿತು.
![](https://suddiudaya.com/wp-content/uploads/2025/02/perla3.jpg)
ಕಾರ್ಯಕ್ರಮವನ್ನು ಸಂಪೂರ್ಣ ಟೆಕ್ಸ್ ಟೈಲ್ಸ್ ಉಜಿರೆ ಇದರ ಮಾಲಕ ಅನಿಲ್ ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷೆ ಶ್ರೀಮತಿ ರೇವತಿ, ಉಪಾಧ್ಯಕ್ಷ ದೇವರಾಜ್, ಉಜಿರೆ ಕ್ಲಸ್ಟರ್ ಸಿಆರ್ ಪಿ ಶ್ರೀಮತಿ ಪ್ರತಿಮಾ ಕೆ. ಎಂ, ಪುತ್ತೂರು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯರಾದ ಲಲಿತಾ, ಎಸ್ ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕವೃಂದ ದವರು ಉಪಸ್ಥಿತರಿದ್ದರು.
ಮುಖ್ಯ ಅತಿಥಿಯಾದ ಬಾಲಚಂದ್ರ ಕೆಮ್ಮಿಂಜೆ ಅವರು ಮಾತನಾಡಿ ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ವೃದ್ಧಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತ ಎಂದು ಶುಭ ಹಾರೈಸಿ ಮೆಚ್ಚುಗೆಯ ನುಡಿಗಳನ್ನಾಡಿದರು. ಮುಖ್ಯ ಶಿಕ್ಷಕಿ ಸೇವಂತಿ ಬಿ ಸ್ವಾಗತಿಸಿ, ಶಿಕ್ಷಕಿ ಉಷಾಲತಾ ವಂದಿಸಿದರು.