ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಅಭಿನಂದನ್ ಹರೀಶ್ ಕುಮಾರ್ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಇವರು ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಯಶಸ್ವಿಯಾಗಿದ್ದಾರೆ.
ಯುವ ಉದ್ಯಮಿಯಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ತನ್ನನ್ನು ತಾನು ಸಕ್ರೀಯಯವಾಗಿ ಸಮಾಜದಲ್ಲಿ ತೊಡಗಿಸಿಕೊಂಡಿದ್ದಾರೆ.