![](https://suddiudaya.com/wp-content/uploads/2025/02/1001665322.jpg)
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವದ ಶುಭ ಸಂದರ್ಭದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಫೆ.8ರಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೈವದ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
![](https://suddiudaya.com/wp-content/uploads/2025/02/1001665311.jpg)
ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ನವಶಕ್ತಿ, ಸಮಿತಿಯ ಕಾರ್ಯಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಪಾಡ್ಯಾರು, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ವಾತ್ಸಲ್ಯ , ಪ್ರಮುಖರಾದ , ಸುನೀಶ್ ಕುಮಾರ್, ಪ್ರದೀಪ್ ಶೆಟ್ಟಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶಶಿರಾಜ್ ಶೆಟ್ಟಿ ಚಂದ್ರರಾಜ್ ಮೊ ದಲಾದವರು ಉಪಸ್ಥಿತರಿದ್ದರು.