ಕನ್ಯಾಡಿ: ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಫೆ.8 ರಂದು ಭೇಟಿ ನೀಡಿದರು.
![](https://suddiudaya.com/wp-content/uploads/2025/02/IMG-20250209-WA0022-1024x800.jpg)
ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಸಂಸ್ಥೆಯ ಬಗ್ಗೆ ಮಾತನಾಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಧನಸಹಾಯ ಮಾಡುವಂತೆ ಮನವಿ ಸಲ್ಲಿಸಲಾಯಿತು. ಮನವಿ ಹಸ್ತಾಂತರವನ್ನು ಸ್ವೀಕರಿಸಿ ಕಟ್ಟಡದ ನಿರ್ಮಾಣ ಶೀಘ್ರ ನೆರವೇರುವಂತೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸೇವಾಧಾಮ ಸಂಚಾಲಕರಾದ ಕೆ. ಪುರಂದರ ರಾವ್, ಸೇವಾಭಾರತಿ ಟ್ರಸ್ಟಿ ಬಿ. ಕೃಷ್ಣಪ್ಪ ಗುಡಿಗಾರ್ , ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಸಂಸ್ಥೆಯ ಸ್ವಯಂಸೇವಕರಾದ ಚಂದನ್ ಗುಡಿಗಾರ್ , ಜಯರಾಜ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.