![](https://suddiudaya.com/wp-content/uploads/2025/02/melanthabettu.jpg)
ಬೆಳ್ತಂಗಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು, ಮೇಲಂತಬೆಟ್ಟು, ತಣ್ಣೀರು ಪಂತ, ಕುತ್ಲೂರು ಗ್ರಾಮಗಳಲ್ಲಿ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
![](https://suddiudaya.com/wp-content/uploads/2025/02/thanniru.jpg)
ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ರಾದ ಶ್ರೀ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.
![](https://suddiudaya.com/wp-content/uploads/2025/02/kuthloor.jpg)