ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ. ಇದರ ವತಿಯಿಂದ ಫೆ.9 ರಂದು ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆಯು ಕಂಕನಾಡಿ ಗರಡಿಯ ಪ್ರಧಾನ ಅರ್ಚಕರಾದ ಹರೀಶ್ ಶಾಂತಿ ಇವರ ನೇತೃತ್ವದಲ್ಲಿ ನಡೆಯಿತು.
![](https://suddiudaya.com/wp-content/uploads/2025/02/thothatadi2.jpg)
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ, ಕರ್ನಾಟಕ ಬ್ಯಾಂಕ್ ನ ನೆರಿಯ ಶಾಖಾ ವ್ಯವಸ್ಥಾಪಕ ರಾಜೇಶ್ ಪಿ.ಬಿ, ಚಾರ್ಮಾಡಿ ಗ್ರಾಮ ಪಂಚಾಯಿತಿನ ಅಭಿವೃದ್ಧಿ ಅಧಿಕಾರಿಯಾದ ಪುರುಷೋತ್ತಮ. ಜಿ, ಸಿವಿಲ್ ಇಂಜಿನಿಯರ್ ಶೈಲೇಶ್ ಆರ್. ಜೆ, ತೋಟತ್ತಾಡಿ ಸಂಘದ ಗೌರವಾಧ್ಯಕ್ಷ ತಿಮ್ಮಪ್ಪ ಪೂಜಾರಿ ಹಾರಗಂಡಿ, ನೆರಿಯ ಸಹಕಾರಿ ಸಂಘದ ಅಧ್ಯಕ್ಷರಾದ ರಾಮ್ ಕುಮಾರ್ ಬೊವಿನಡಿ, ಚಾರ್ಮಾಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಯಶೋಧರ ಪೂಜಾರಿ ವಲಸರಿ, ಯುವ ವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕ ಸಂತೋಷ್ ಮಿಯ್ಯಾರು, ಮಹಿಳಾ ಬಿಲ್ಲವ ವೇದಿಕೆ ತೋಟತ್ತಾಡಿ ಇದರ ಅಧ್ಯಕ್ಷರಾದ ಶ್ರೀಮತಿ ಪ್ರೇಮ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಸುಕೇಶ್ ಪೂಜಾರಿ ಪರಾರಿ, ಸಂಘದ ಕಾರ್ಯದರ್ಶಿ ಹರೀಶ್ ಕುಮಾರ್ ಉಪಸ್ಥಿತರಿದ್ದರು.
![](https://suddiudaya.com/wp-content/uploads/2025/02/thotha.jpg)
ಶ್ರೀಮತಿ ಪ್ರಮೀಳಾ ದೇಜಪ್ಪ ಪೂಜಾರಿ ವಾರ್ಷಿಕ ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ಕಳೆದ ಬಾರಿಯ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 500ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ಮೋಕ್ಷಿತಾ ಬುಲಪ್ಪು ಅವರನ್ನು ಗೌರವಿಸಲಾಯಿತು. ಸುದೀಪ್ ಪ್ರಾಧ್ಯಾಪಕರು ಐ ಐ ಟಿ ಕಾಲೇಜು ತುಂಬೆ ಸ್ವಾಗತಿಸಿ, ಕುಮಾರಿ ಅನ್ವಿತಾ ಪ್ರಾರ್ಥನೆಗ್ಯೆದರು ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪವಿತ್ರ ಕಾರ್ಯಕ್ರಮ ನಿರೂಪಿಸಿ, ಕುಮಾರಿ ಅನ್ವಿತಾ ಧನ್ಯವಾದವಿತ್ತರು.