ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ ಫೆ.10ರಂದು ಬೆಳ್ತಂಗಡಿ ತಾಲೂಕು ಕಚೇರಿ ಆವರಣದಲ್ಲಿ ಧರಣಿ ನಡೆಯಿತು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಿದರು.