April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್ ರವರ ಅಧ್ಯಕ್ಷತೆಯಲ್ಲಿ ಫೆ.11ರಂದು ನಾರಾವಿ ಕಾಶಿಮಠ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಜೋಸೆಫ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಪಂಚಾಯತ್‌ ಸದಸ್ಯರುಗಳಾದ ಶ್ರೀಮತಿ ಯಶೋಧ, ಸಂತೋಷ್, ನಾರಾಯಣ, ಶ್ರೀಮತಿ ಸರಿತಾ, ಶ್ರೀಮತಿ ಮೀನಾ, ವಸಂತ, ಶ್ರೀಮತಿ ಮಲ್ಲಿಕಾ, ಶ್ರೀಮತಿ ಮಮತಾ ಎ.ಜಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ಯೋಗಿನಿ ಶೆಟ್ಟಿ ಅನುಪಾಲನ ವರದಿ, ಪಂಚಾಯತ್ ಸಿಬ್ಬಂದಿ ಸಂತೋಷ್ ವಾರ್ಡ್ ಸಭೆಯ ಬೇಡಿಕೆ, ಬಿಲ್ ಕಲೆಕ್ಟರ್ ಸತೀಶ್ ಜಮಾ ಖರ್ಚುಗಳ ವಿವರಗಳನ್ನು ವಾಚಿಸಿದರು. ಗ್ರಾ.ಪಂ. ಸದಸ್ಯ ಉದಯ ಹೆಗ್ಡೆ ವಂದಿಸಿದರು.

Related posts

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!