April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಷ್ಟವಾಗಿದೆ.


ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ ಕೊರೆಯ ಎಂಬವರಿಗೆ ಮಾಹಿತಿ ಸಿಕ್ಕಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆ ಕೂಡಲೇ ಅಗ್ನಿಶಾಮಕ ದಳದವರಿಗೆ, ಅರಣ್ಯ ಇಲಾಖೆಯವರಿಗೆ, ಗ್ರಾಮ ಪಂಚಾಯತ್ ಗೆ ತಿಳಿಸಿದ ಪ್ರಕಾರ ಇನ್ನೋರ್ವ ಸದಸ್ಯರಾದ ಲತೀಫ್ ಪರಿಮ ರವರು ಕೂಡಾ ಸ್ಥಳೀಯರಿಗೆ ಬೆಂಕಿ ನಂದಿಸಲು ಸಹಕರಿಸುವಂತೆ ಕೋರಿಕೊಂಡರು.


ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ ಫಾರೆಸ್ಟರ್ ಶ್ರೀಮತಿ ಪೂಜಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು. ಪಂಚಾಯತ್ ಹಾಗೂ ಇಲಾಖೆಯ ಈ ಕಾರ್ಯವೈಖರಿಯನ್ನು ಸಾರ್ವಜನಿಕರು ಶ್ಲಾಘಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!