September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಫೆ.11 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ ಕಾರ್ಯಕ್ರಮ, ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಮತ್ತು ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಸಹಯೋಗದೊಂದಿಗೆ ಉಚಿತ ದಂತ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಲವೀನಾ ನೊರೊನ್ಹ-ಮುಖ್ಯ ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಮುಲ್ಕಿ, ಡಾ.ನಫೀಸಾ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ವಾಮದಪದವು, ಡಾ.ಶಶಿಕಲಾ-ದಂತ ಆರೋಗ್ಯ ವೈದ್ಯಾಧಿಕಾರಿ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಡಾ.ತುಷಾರ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

60ಕ್ಕೂ ಹೆಚ್ಚು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ವಿಜಯಕುಮಾರ್ ಆಪ್ತಸಮಾಲೋಚಕರು ವೆನ್ಲಾಕ್ ಆಸ್ಪತ್ರೆ ಮಂಗಳೂರು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು, ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಿಯೋನ್ ಅಶ್ರಮದ ವೈದ್ಯರಾದ ಡಾ.ಶಿವಾನಂದ ಸ್ವಾಮಿ, ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya
error: Content is protected !!