24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

ಕನ್ಯಾಡಿ II: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.07 ರಂದು ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚನೆ ಮಾಡಲಾಯಿತು.

18 ಪೋಷಕ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯ ಅಧ್ಯಕ್ಷರಾಗಿ ಎರಡನೆಯ ಬಾರಿಗೆ ಕೆ ನಂದ, ಉಪಾಧ್ಯಕ್ಷರಾಗಿ ಶ್ರೀಮತಿ ಚಂದ್ರಾವತಿ ಆಯ್ಕೆಯಾಗಿರುತ್ತಾರೆ.

ಸಮಿತಿಯ ರಚನೆಯನ್ನು ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರು ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಮತ್ತು ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಸುವರ್ಣ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ , ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು. ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹ ಶಿಕ್ಷಕರಾದ ಶ್ರೀಮತಿ ರಾಜಿ ಸಿ ಕೆ ವಂದಿಸಿದರು. ಸಹ ಶಿಕ್ಷಕರಾದ ಶ್ರೀಮತಿ ಅರ್ಚನಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!