September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಷ್ಟವಾಗಿದೆ.


ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ ಕೊರೆಯ ಎಂಬವರಿಗೆ ಮಾಹಿತಿ ಸಿಕ್ಕಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆ ಕೂಡಲೇ ಅಗ್ನಿಶಾಮಕ ದಳದವರಿಗೆ, ಅರಣ್ಯ ಇಲಾಖೆಯವರಿಗೆ, ಗ್ರಾಮ ಪಂಚಾಯತ್ ಗೆ ತಿಳಿಸಿದ ಪ್ರಕಾರ ಇನ್ನೋರ್ವ ಸದಸ್ಯರಾದ ಲತೀಫ್ ಪರಿಮ ರವರು ಕೂಡಾ ಸ್ಥಳೀಯರಿಗೆ ಬೆಂಕಿ ನಂದಿಸಲು ಸಹಕರಿಸುವಂತೆ ಕೋರಿಕೊಂಡರು.


ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ ಫಾರೆಸ್ಟರ್ ಶ್ರೀಮತಿ ಪೂಜಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು. ಪಂಚಾಯತ್ ಹಾಗೂ ಇಲಾಖೆಯ ಈ ಕಾರ್ಯವೈಖರಿಯನ್ನು ಸಾರ್ವಜನಿಕರು ಶ್ಲಾಘಿಸಿದರು.

Related posts

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!