April 21, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ


ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕಡಿರುದ್ಯಾವರದಲ್ಲಿ ಫೆ.12ರಂದು ಬುಧವಾರ ಸಂಜೆ ನಡೆದಿದೆ.

ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಬೊಳ್ಳೂರುಬೈಲು ಕ್ರಾಸ್ ಸಮೀಪ ಮುಂಡಾಜೆಯಿಂದ ದಿಡುಪೆ ಕಡೆ ಹೋಗುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬೈಕ್ ಸವಾರನ ಬಳಿ ದೊರೆತ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸದಂತೆ ಆತನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ವಿನಯ ಕೆ.(22ವ) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!