24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ-ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದು ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಫೆ.12ರಂದು ರಾತ್ರಿ ಸಂಭವಿಸಿದೆ.

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (30ವ) ಈ ದುರ್ಘಟನೆಯಲ್ಲಿ ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮುಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ, ಸ್ಥಳೀಯರ ಸಹಕಾರದಲ್ಲಿ ಮೃತದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya
error: Content is protected !!