ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಶ್ರೀಮತಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಕ್ಷೇತ್ರದ ಶ್ರೀಮತಿ ಗಿರಿಜಾ, ಶ್ರೀಮತಿ ರಾಜೀವಿ, ಶ್ರೀಮತಿ ಪ್ರೇಮಾ, ಶ್ರೀಮತಿ ವೈಶಾಲಿ, ಶ್ರೀಮತಿ ಮಮತಾ, ಶ್ರೀಮತಿ ಕುಸುಮಾವತಿ, ಶ್ರೀಮತಿ ಹೇಮಲತಾ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಶ್ರೀಮತಿ ಇಂದಿರಾ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಶ್ರೀಮತಿ ನಳಿನಾಕ್ಷಿ ಡಿ., ಪ.ಜಾತಿ ಕ್ಷೇತ್ರದಿಂದ ಶ್ರೀಮತಿ ಅಪ್ಪಿ, ಪ.ಪಂಗಡದಿಂದ ಶ್ರೀಮತಿ ಸುನಂದ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.