19.1 C
ಪುತ್ತೂರು, ಬೆಳ್ತಂಗಡಿ
February 13, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ


ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕಡಿರುದ್ಯಾವರದಲ್ಲಿ ಫೆ.12ರಂದು ಬುಧವಾರ ಸಂಜೆ ನಡೆದಿದೆ.

ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಬೊಳ್ಳೂರುಬೈಲು ಕ್ರಾಸ್ ಸಮೀಪ ಮುಂಡಾಜೆಯಿಂದ ದಿಡುಪೆ ಕಡೆ ಹೋಗುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬೈಕ್ ಸವಾರನ ಬಳಿ ದೊರೆತ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸದಂತೆ ಆತನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ವಿನಯ ಕೆ.(22ವ) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ಹೊಸ ವರ್ಷ ಆಚರಣೆ

Suddi Udaya
error: Content is protected !!