September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ


ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕಡಿರುದ್ಯಾವರದಲ್ಲಿ ಫೆ.12ರಂದು ಬುಧವಾರ ಸಂಜೆ ನಡೆದಿದೆ.

ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಬೊಳ್ಳೂರುಬೈಲು ಕ್ರಾಸ್ ಸಮೀಪ ಮುಂಡಾಜೆಯಿಂದ ದಿಡುಪೆ ಕಡೆ ಹೋಗುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬೈಕ್ ಸವಾರನ ಬಳಿ ದೊರೆತ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸದಂತೆ ಆತನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ವಿನಯ ಕೆ.(22ವ) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
error: Content is protected !!