April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.12 ರಿಂದ ಪ್ರಾರಂಭಗೊಂಡು ಫೆ.21 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಇಂದು (ಫೆ.12) ಬೆಳಿಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ ಶಾಂತಿನಾಥ ಸ್ವಾಮಿ, ಭ| ಶ್ರೀ ಅನಂತನಾಥ ಸ್ವಾಮಿ, ಭ| ಶ್ರೀ ಚಂದ್ರನಾಥ ಸ್ವಾಮಿ, ಭ| ಶ್ರೀ ಪಾರ್ಶ್ವನಾಥ ಸ್ವಾಮಿ ದೇವರಿಗೆ “ಕ್ಷೀರಾಭಿಷೇಕ”, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ಹಾಗೂ ಬ್ರಹ್ಮದೇವರಿಗೆ “ಮಹಾಪೂಜೆ” ನಡೆಯಿತು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಾನದಲ್ಲಿ ಬೆಳಗ್ಗೆ ಪ್ರಶ್ನಾಚಿಂತನ, ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕ ಕಲಶ, ಧ್ವಜಾರೋಹಣ ಬಳಿಕ ಪ್ರಸನ್ನ ಪೂಜೆ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಜಯವರ್ಮರಾಜ ಬಳ್ಳಾಲ್ ಕೆಲ್ಲಗುತ್ತು ಸಬ್ರಬೈಲು , ರಾಜವರ್ಮ ಬಲ್ಲಾಳ್, ಬಲ್ಲಾಳ್ ಕುಟುಂಬಸ್ಥರು, ಅರ್ಚಕರು, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya
error: Content is protected !!