23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಯ ” ಶ್ರೀ ಮಂಜುನಾಥ ದಳದ “ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಕೌಟ್ಸ್ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ರಾಜ್ಯದ ರಾಜ್ಯಪಾಲರಿಂದ ಬೆಂಗಳೂರಿನ ಗಾಜಿನ ಮನೆಯಲ್ಲಿ ಪ್ರಶಸ್ತಿ ಪತ್ರವನ್ನು ಸ್ವೀಕರಿಸಲಿದ್ದಾರೆ.

ಇವರಿಗೆ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಸಲಹೆಯೊಂದಿಗೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಕೌಟ್ ಮಾಸ್ಟರ್ ನಿವೃತ್ತ ಶಿಕ್ಷಕ ದತ್ತಾತ್ರೇಯಗೊಲ್ಲ ಇವರ ಮಾರ್ಗದರ್ಶನದಲ್ಲಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ, ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!