33.3 C
ಪುತ್ತೂರು, ಬೆಳ್ತಂಗಡಿ
February 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಅವರ ನೇತೃತ್ವದ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ ನೀಡಿದರು.

ತಂಡವು ತರಗತಿ ಕೋಣೆಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಸಂವಾದ ನಡೆಸಿ, ಶಾಲೆಯ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ಮತ್ತು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಶಿಕ್ಷಣ ಪುಸ್ತಕಗಳನ್ನದರಿಸಿದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದ ಅಮಿತ್ ಏಳನೇ ತರಗತಿ ಇವನನ್ನು ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಅನ್ವಿತ್ (ಚಿತ್ರಕಲೆ),ಸ್ಮಿತಾ(ಪ್ರಬಂಧ), ಶ್ರಾವ್ಯ (ಶ್ಲೋಕ ಕಂಠ ಪಾಠ) , ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Related posts

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya
error: Content is protected !!