September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ ಪರೀಕ್ಷೆ, ಆಪ್ತ ಸಮಾಲೋಚನೆ, ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಕ್ಸ್ ರೇ ಮಾಡಿಸುವ ಮೂಲಕ ಕ್ಷಯ ರೋಗ ತಪಾಷಣೆ ನಡೆಸಲಾಯಿತು.

ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪ್ರಸನ್ನ ಆಯುರ್ವೇದ ಕಾಲೇಜಿನ BAMS ವೈದ್ಯ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿನ ಸಿಬ್ಬಂದಿಗಳು ಸಹಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮನಮೋಹನ್ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರು ಮತ್ತು ವೈದ್ಯಧಿಕಾರಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ರವರು ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.

Related posts

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2026

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

Suddi Udaya
error: Content is protected !!