April 19, 2025
Uncategorized

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕತ್ತರಿಗುಡ್ಡೆ ಅನ್ನಾರು ಸಮೀಪ ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆಯೊಂದು .ಫೆ.13ರಂದು ಗುರುವಾರ ಪತ್ತೆಯಾಗಿದೆ.
ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿ
ರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿ,ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿದೆ. ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡಲಾಗಿದ್ದು ಸದ್ಯ ಆನೆ ಅದೇ ಸ್ಥಳದಲ್ಲಿದೆ.
ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

Related posts

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya
error: Content is protected !!