ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಇಪ್ಪತ್ತೇಳನೆ ಕನ್ನಡ ಸಾಹಿತ್ಯ ಸಮ್ಮೇಳನವು ಫೆ. 21 ಮತ್ತು 22 ರಂದು ಮಂಗಳೂರಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಂಗಳಸಭಾಂಗಣದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರವನ್ನು ಫೆ.12ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಯುವರಾಜ ಪೂವಣಿ, ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಮತ್ತು ಸಹಶಿಕ್ಷಕಿ ಸುಮಲತಾ ಉಪಸ್ಥಿತರಿದ್ದರು.