April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಅತೀ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಘಟನೆ’ ಕೊಡಮಾಡುವ ಅತ್ಯುನ್ನತ ಪ್ರಶಸ್ತಿಯಾದ ‘ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ 2024 (ಅತ್ಯುತ್ತಮ ಸಂಸ್ಥೆ ಹಾಗೂ ವಿಶೇಷ ಅಂಗೀಕಾರ ಪ್ರಶಸ್ತಿ) ಲಭಿಸಿದೆ.

ಇತ್ತೀಚೆಗೆ ನವದೆಹಲಿಯಲ್ಲಿ ಪಂಕಜ್ ಚೌಧರಿ ಕೇಂದ್ರ ಹಣಕಾಸು ಸಚಿವರು, ರಾಜ್ಯ ಖಾತೆ ಇವರು ಪ್ರಶಸ್ತಿ ಪ್ರಧಾನ ಮಾಡಿದರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಮಹಾರಾಷ್ಟ್ರ ಹಾಗೂ ಖಾಸಗಿ ಬ್ಯಾಂಕ್‌ಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಹೀಗೆ ದೇಶದ ಇಪ್ಪತ್ತು ಪ್ರತಿಷ್ಠಿತ ಸಂಸ್ಥೆಗಳು ಈ ಪ್ರಶಸ್ತಿಗೆ ಭಾಜನವಾಗಿವೆ.
ದೇಶದ ಎಲ್ಲಾ ಗ್ರಾಮ ಗ್ರಾಮಗಳಲ್ಲಿ ಬ್ಯಾಂಕ್‌ಗಳು ತಮ್ಮ ಶಾಖೆಗಳನ್ನು ತೆರೆದು ಬ್ಯಾಂಕಿಂಗ್ ಸೇವೆ ನೀಡುವುದು ಅಸಾಧ್ಯವೆಂಬುದನ್ನು ಪರಿಗಣಿಸಿದ ವಿತ್ತ ಸಚಿವಾಲಯ ಹಾಗೂ ದೇಶದ ಆರ್ಥಿಕ ನಿಯಂತ್ರಕ ಸಂಸ್ಥೆಗಳು ಆರ್ಥಿಕ ಸೇರ್ಪಡೆ ಕಾರ್ಯಕ್ರಮದಡಿ ವ್ಯಕ್ತಿಗತ ಹಾಗೂ ಆಯ್ದ ಸಂಸ್ಥೆಗಳನ್ನು ಬಿ.ಸಿ.ಯಾಗಿ ನಿಯೋಜಿಸಿಕೊಂಡಿವೆ. ಇದರನ್ವಯ ‘ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘ ಅನ್ನು ಬ್ಯಾಂಕ್‌ಗಳು ಎಸ್.ಹೆಚ್.ಜಿ. ಬ್ಯಾಂಕ್ ಕ್ರೆಡಿಟ್ ಲಿಂಕೆಜ್ ಪ್ರೋಗ್ರಾಂ (ಸ್ವ ಸಹಾಯ ಸಂಘಗಳ ಬ್ಯಾಂಕ್ ಸಾಲ ಸೌಲಭ್ಯ ಒದಗಣೆ) ಸೇವೆಗಳನ್ನು ಒದಗಿಸಲು ತನ್ನ ಬಿ.ಸಿ.’ (ಬ್ಯುಸಿನೆಸ್ ಕರೆಸ್ಪಾಂಡೆನ್ಸ್) ಬ್ಯಾಂಕ್‌ನ ವ್ಯವಹಾರ ಪ್ರತಿನಿಧಿಯಾಗಿ ನಿಯೋಜಿಸಿಕೊಂಡಿವೆ. ತನ್ಮೂಲಕ ಗ್ರಾಮ ಗ್ರಾಮಗಳಲ್ಲಿ ಸ್ವಸಹಾಯ ಸಂಘಗಳಿಗೆ ಬ್ಯಾಂಕ್‌ಗಳಿಂದ ನೇರವಾಗಿ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸುತ್ತಿವೆ. ಈ ಮೂಲಕ ಬ್ಯಾಂಕ್‌ನ ಸಾಲ ಸೌಲಭ್ಯಗಳನ್ನು ಗ್ರಾಮ ಗ್ರಾಮಗಳಿಗೆ ತಲುಪಿಸುವ ಕೆಲಸವನ್ನು ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ.


ಗ್ರಾಮಾಭಿವೃದ್ಧಿ ಯೋಜನೆಯು ಸ್ವಸಹಾಯ ಸಂಘಗಳಿಗೆ ಬ್ಯಾಂಕ್‌ಗಳಿಂದ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಇಂದು ಲಕ್ಷಾಂತರ ಕೃಷಿ, ಸ್ವ ಉದ್ಯೋಗ ಚಟುವಟಿಕೆಗಳನ್ನು ಸೃಷ್ಟಿಸುವ ಮೂಲಕ ಗ್ರಾಮೀಣ ಪ್ರದೇಶದ ರೈತರು, ಬಡವರು, ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗಿದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶದ ಯುವಕ ? ಯುವತಿಯರಿಗೆ ಬ್ಯಾಂಕ್‌ನಿಂದ ಸ್ವಸಹಾಯ ಸಂಘ ವ್ಯವಸ್ಥೆಯಲ್ಲಿ ಶೇ. 14ರ (ಬ್ಯಾಂಕ್ ಬಡ್ಡಿದರ ಹಾಗೂ ಬ್ಯಾಂಕ್ ನೀಡುವ ಬಿ.ಸಿ. ಸೇವಾಶುಲ್ಕ ಸೇರಿ) ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು, ತರಬೇತಿಗಳನ್ನು ಒದಗಿಸುವ ಮೂಲಕ ಲಕ್ಷಾಂತರ ಮಂದಿಗೆ ಗುಡಿ ಕೈಗಾರಿಕೆಗಳು, ಕಿರು ಉದ್ಯಮ, ವ್ಯಾಪಾರ, ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ನೆರವಾಗಿದೆ.
ಗ್ರಾಮಾಭಿವೃದ್ಧಿ ಯೋಜನೆಯು ದೇಶದ ಅತ್ಯಂತ ಪ್ರಮುಖ ಬ್ಯಾಂಕ್ ಆದ ‘ಸಿಡ್ಬಿ’ ಬ್ಯಾಂಕ್‌ನ ‘ಪ್ರಯಾಸ್ ‘ ಕಾರ್ಯಕ್ರಮವನ್ನು ಅನುಷ್ಠಾನ ಮಾಡುತ್ತಿದ್ದು ಇದರಡಿ ಅತಿ ಕಡಿಮೆ ಬಡ್ಡಿದರದಲ್ಲಿ ಕಿರು ಉದ್ಯಮವನ್ನು ಆರಂಭಿಸಲು ಗರಿಷ್ಠ ಮೊತ್ತದ ಸಾಲವನ್ನು ಸಿಡ್ಬಿಯಿಂದ ನೇರವಾಗಿ ಸ್ವ ಉದ್ಯೋಗ ಘಟಕ ಪ್ರಾರಂಭಿಸುವ ಸದಸ್ಯರಿಗೆ ದೊರಕಿಸಿಕೊಡುತ್ತಿದೆ. ಸಿಡ್ಬಿ ಪ್ರಯಾಸ್ ಕಾರ್ಯಕ್ರಮದ ಮೂಲಕ ೫೬,೦೫೭ ಸದಸ್ಯರಿಗೆ ರೂ. 1,971 ಕೋಟಿ ಮೊತ್ತದ ಸಾಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಆ ಮೂಲಕ ಸಾವಿರಾರು ಮಂದಿ ಗ್ರಾಮೀಣ ಪ್ರದೇಶದ ಯುವಕ – ಯುವತಿಯರು ವ್ಯಾಪಾರ, ಕಿರು ಉದ್ಯಮಗಳನ್ನು ಆರಂಭಿಸುವ ಮೂಲಕ ಸ್ವಾವಲಂಬಿ ಬದುಕನ್ನು ಸಾಗಿಸುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya
error: Content is protected !!