April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ.

ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿ ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.

ಸಂಪೂತ್ಯವಾಗಿ ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವಂತೆ ಕಂಡು ಬಂದಿತ್ತು. ರಾತ್ರಿ ಈ ಆನೆ ಮಲಗಿದ್ದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಡಾನೆ ಯಾವರೀತಿ ಸಾವನ್ನು ಅಪ್ಪಿದೆ ಎಂಬುದು ಪೋಸ್ಟ್ ಮಾರ್ಟಂ ಬಳಿಕವೇ ತಿಳಿದು ಬರಬೇಕಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದು ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಕಾಡಾನೆ ಜನವಸತಿ ಪ್ರದೇಶದ ಸಮೀಪ ಸಾವನ್ನಪ್ಪಿದ್ದು ಅರಣ್ಯ ಇಲಾಖೆಯವರು ಎಲ್ಲ ರೀತಿಯ ಪರಿಶೀಲನೆಗಳನ್ನು ನಡೆಸಿದ ಬಳಿಕವಷ್ಟೇ ಆನೆಯ ಮೃತದೇಹದ ದಹನ ಕಾರ್ಯ ಮಾಡಲಿದ್ದಾರೆ.

Related posts

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya
error: Content is protected !!