21 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು, ತಮ್ಮ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕ ಹರೀಶ್ ಪೂಂಜರಿಗೆ ಫೆ.14ರಂದು ಸಲ್ಲಿಸಿ ದರು.

ಈ ಹಿಂದೆ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಅದರಂತೆ ಮುಷ್ಕರವನ್ನು ಹಿಂಪಡೆಯಲಾಗಿತ್ತು. ನಂತರ ಸರಕಾರ ನೌಕರರ ಬೇಡಿಕೆಗಳ ಬಗ್ಗೆ ಯಾವುದೇ ತೃಪ್ತಿದಾಯಕ ಕ್ರಮಗಳನ್ನು ಕೈಗೊಂಡಿಲ್ಲ, ಬೇಡಿಕೆಗಳನ್ನು ಈಡೇರಿಸಿಲ್ಲ, ಬದಲಾಗಿ ಮುಷ್ಕರ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ನೀಡಿದೆ. ಇದರಿಂದಾಗಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ ಕರೆಯಂತೆ ಸರಕಾರದ ಮುಂದೆ 23 ಬೇಡಿಕೆಗಳನ್ನು ಮುಂದುವರಿಸಿ, ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ನಡೆಸುತ್ತಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್, ಪರಮೇಶ್ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya
error: Content is protected !!