ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಫೆ.20ರಿಂದ21 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಫೆ.20 ರಂದು ಬೆಳಿಗ್ಗೆ ಗಂಟೆ 8-30ರಿಂದ ಪ್ರಾರ್ಥನೆ, ಪುಣ್ಯಾಹ, ಬೆಳಿಗ್ಗೆ ಗಂಟೆ 10-30ಕ್ಕೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಗಂಟೆ 12-00ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿ, ಮಧ್ಯಾಹ್ನ ಗಂಟೆ 12-30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಾಯಂಕಾಲ ಗಂಟೆ 6-00ರಿಂದ ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಸಾಯಂಕಾಲ ಗಂಟೆ 6-00ರಿಂದ: ರಂಗಪೂಜೆ. ಸಂಜೆ ಗಂಟೆ 6-30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಊರವರಿಂದ, ರಾತ್ರಿ ಗಂಟೆ 9-00ರಿಂದ ತುಳುವರೆ ಉಡಲ್ ಜೋಡುಕಲ್ ಕಲಾವಿದರಿಂದ ತನಿಯಜ್ಜೆ ನಾಟಕ ನಡೆಯಲಿದೆ.
ಫೆ.21 ರಂದು ಬೆಳಿಗ್ಗೆ ಗಂಟೆ 7-00ರಿಂದ: ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪ್ರಧಾನಹೋಮ, ಕಲಶಾಭಿಷೇಕ ಗಂಟೆ 10-00ಕ್ಕೆ: ಮಹಾಪೂಜೆ ಗಂಟೆ 10-30ರಿಂದ: ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ ಅನ್ನಸಂತರ್ಪಣೆ ಗಂಟೆ 7-00ರಿಂದ ಉತ್ಸವ ಬಲಿ, ಕಟ್ಟೆ ಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ನಡೆಯಲಿದೆ.