September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಪಕ್ಷದ ಕಚೇರಿಯಲ್ಲಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾಶ್ರೀನಿವಾಸ್ ಗೌಡ ಬೆಳಾಲು ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ವಂದೇ ಮಾತರಂ ಗೀತೆಯನ್ನು ಹಾಡಿ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಭೆ ಆರಂಭಗೊಂಡಿತು .ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲಿಖಿತ ಶೆಟ್ಟಿ ಯವರು ಆಗಮಿಸಿ ಅಹಲ್ಯ ಬಾಯಿ ಹೊಳ್ಕರ್ ಅವರ 300 ನೇ ಜನ್ಮ ಶತಾಬ್ದಿಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು, ಹಾಗೂ ಫೆ. 23ರಿಂದ 29 ರೊಳಗೆ ಸಾಮರಸ್ಯ ಕಾರ್ಯಕ್ರಮದಡಿಯಲ್ಲಿ ಶಕ್ತಿಕೇಂದ್ರವಾರು ಪ್ರಮುಖರು ಒಂದು ಕುಟುಂಬವನ್ನು ತಮ್ಮ ಮನೆಗೆ ಕರೆದು ಸಹಭೋಜನವನ್ನು ಮಾಡಬೇಕು ಎಂದು ಹೇಳಿದರು.

ಹಾಗೆಯೇ ಉಪಸ್ಥಿತರಿದ್ದ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರು ಹಾಗೂ ಬೆಳ್ತಂಗಡಿ ಮಹಿಳಾ ಮೋರ್ಚಾ ಪ್ರಭಾರಿ ಶ್ರೀಮತಿ ಬಬಿತ ಇವರು ಮಹಿಳಾ ಮೋರ್ಚಾದಲ್ಲಿ ನಡೆಯುವ ಕಾರ್ಯವೈಖರಿಯ ಬಗ್ಗೆ ಶ್ಲಾಘನೀಯ ಮಾತುಗಳನ್ನಾಡಿದರು ಮತ್ತು ಸಮಯ ಪಾಲನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ತಿಳಿಸಿದರು. ಜಿಲ್ಲಾ ಭಾಜಪಾ ಕಾರ್ಯದರ್ಶಿ ಶ್ರೀಮತಿ ವಸಂತಿ ಮಚ್ಚಿನ, ಬೆಳ್ತಂಗಡಿ ಮಂಡಲ ಪ್ರಧಾನಕಾರ್ಯದರ್ಶಿ ಹಾಗೂ ಮಹಿಳಾ ಮೋರ್ಚಾದ ಮಂಡಲ ಪ್ರಭಾರಿ ಜಯಾನಂದ ಗೌಡ ಸಮಾಯೋಚಿತವಾಗಿ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕಿಯಾಗಿ ಆಯ್ಕೆಯಾದ ರೈತ ಮೋರ್ಚಾದ ಸದಸ್ಯೆಯಾದ ಅಶ್ವಿನಿ ಹೆಬ್ಬಾರ್, ಉಜಿರೆ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷೆಯಾಗಿ ಆಯ್ಕೆಯಾದ ಮಹಿಳಾ ಮೋರ್ಚಾ ಕಾರ್ಯದರ್ಶಿಯಾದ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಜಿರೆ, ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿಂದುಳಿದ ಮೋರ್ಚಾ ಸದಸ್ಯೆ ಆದ ಪ್ರಮೀಳಾ ಉಜಿರೆ, ಬೆಳ್ತಂಗಡಿ ಜೆ ಸಿ ಐ ಅಧ್ಯಕ್ಷರಾಗಿ ಆಯ್ಕೆಯಾದ ಮಹಿಳಾ ಮೋರ್ಚಾ ಸದಸ್ಯೆಯಾದ ಆಶಾಲತ ಇವರುಗಳನ್ನು ಅಭಿನಂದಿಸಿದಲಾಯಿತು.

ಸಭೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು. ಮಂಡಲ ಮಹಿಳಾ ಮೋರ್ಚಾದ ಪ್ರಧಾನಕಾರ್ಯದರ್ಶಿಯಾದ ಶ್ರೀಮತಿ ಪೂರ್ಣಿಮಾ ಜಯಂತ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ನಿರೂಪಿಸಿ , ಶ್ರೀಮತಿ ಚಂಚಲಾಕ್ಷಿ ಧನ್ಯವಾದವಿತ್ತರು.

Related posts

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!