23.1 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭವು ಶಾಲಾ ಸಂಚಾಲಕರಾದ ವಂ! ಫಾ! ಅಬೆಲ್ ಲೋಬೊರವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಭವನದಲ್ಲಿ ನಡೆಯಿತು.

ಪ್ರಾಂಶುಪಾಲರಾದ ವಂ! ಫಾ! ವಿಜಯ್ ಲೋಬೋ ರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲೆಯಲ್ಲಿ ಶಿಶು ಪಾಲನಾ ಕೇಂದ್ರವನ್ನು ತೆರೆದು ಅದರ ಪ್ರಗತಿಗೆ ಸಹಕಾರವನ್ನಿತ್ತ ಅಭಿನಂದಿಸಿದರು.


ಮುಂದಕ್ಕೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸಂಚಾಲಕರಾದ ವಂ! ಫಾ! ಅಬೆಲ್ ಲೋಬೊರವರು ಬಹುಮಾನ ವಿತರಿಸಿದರು. ನಂತರ ಮುಖ್ಯ ಅತಿಥಿಗಳಾದ ಅನುಗ್ರಹ ವಿದ್ಯಾ ಸಂಸ್ಥೆಯ ಹಿರಿಯ ವಿದ್ಯಾರ್ಥೀನಿಯಾದ ಶ್ರೀಮತಿ ರಮ್ಯಾ ಡಿ. ಕೆ ರವರು ಮಕ್ಕಳಿಗೆ ಪದವಿ ಪ್ರದಾನ ಮಾಡಿ ಮಕ್ಕಳಿಗೆ ಶುಭ ಹಾರೈಸಿದರು.

ಸಮಾರಂಭದ ಆಧ್ಯಕ್ಷ ವಂ! ಫಾ! ಅಬೆಲ್ ಲೋಬೊರವರು ಆಧ್ಯಕ್ಷೀಯ ಭಾಷಣ ಮಾಡುತ್ತಾ ಕಾರ್ಯಕ್ರಮಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮಕ್ಕಳಿಗೆ ಶುಭ ಕೋರಿದರು. ವೇದಿಕೆಯಲ್ಲಿದ್ದ ಎಲ್ಲಾ ಅತಿಥಿ ಅಭ್ಯಾಗತರಿಗೆ ಯಲ್.ಕೆ.ಜಿ ಪುಟಾಣಿಗಳು ಧನ್ಯವಾದವನ್ನಿತ್ತು ಕಾರ್‍ಯಕ್ರಮಕ್ಕೆ ಮೆರಗನ್ನು ನೀಡಿದರು.


ವಿದ್ಯಾರ್ಥಿ ಸ್ಮಯನ್ ಜೈನ್ ನಿರೂಪಿಸಿದ ಕಾರ್ಯಕ್ರಮದ ನಂತರ ಪುಟಾಣಿ ಮಕ್ಕಳಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಅಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷದ ಸಂಘದ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಸಹಶಿಕ್ಷಕಿಯಾದ ಶ್ರೀಮತಿ ಗ್ರೇಸಿ ಸಲ್ಡಾನ್ಹ ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು. ಯಲ್.ಕೆ.ಜಿ ಮತ್ತು ಯು.ಕೆ.ಜಿ ಸಹಶಿಕ್ಷಕಿಯರಾದ ಶ್ರೀಮತಿ ವಿನ್ನಿ ಮರಿಯ, ಶ್ರೀಮತಿ ರೇಷ್ಮಾ ಡಿಸೋಜ ಹಾಗೂ ಶ್ರೀಮತಿ ಅಕ್ಷತಾರವರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya
error: Content is protected !!