26.1 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿ ಇತ್ತೀಚೆಗೆ ದಿವಂಗತರಾದ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದ ಕಾಶ್ಮೀರಿ ಮೆನೇಜಸ್‌ ಅವರ ನಿಧನದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಇಂದು (ಫೆ. 15) ಶ್ರದ್ಧಾಂಜಲಿ ಸಭೆ ನಡೆಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ಜೈನ್ ಅವರು, ಮೆನೇಜಸ್‌ ಅವರು ಸಂಸ್ಥೆಯಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.

ಶಿಕ್ಷಕ ಯುವರಾಜ ಅವರು ಶ್ರೀಯುತ ರಿಗೆ ನುಡಿ ನಮನವನ್ನು ಸಲ್ಲಿಸುತ್ತಾ , ಶಿಕ್ಷಣ ಕಾಶಿ ಎನಿಸಿದ ಉಜಿರೆಯಲ್ಲಿ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಆರಂಭವಾದ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿನಿಲಯದ ಪ್ರಧಾನ ಪಾಲಕರಾಗಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೃಷಿ, ಹೈನುಗಾರಿಕೆ, ವ್ಯಕ್ತಿತ್ವ ವಿಕಸನ ತರಬೇತಿಗಳನ್ನು ನೀಡುವಲ್ಲಿ ಕಾಶ್ಮೀರಿ ಮೆನೇಜಸ್‌ ಸಫಲರಾದವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಭಾಗ ಹಾಗೂ ಶ್ರೀ ಧ. ಮಂ. ರೆಸಿಡೆನ್ಶಿಯಲ್ ಪಿಯು ಕಾಲೇಜಿನ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು” ಎಂದರು.

ಕಾಶ್ಮೀರಿ ಮೆನೇಜಸ್‌ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು..

ಶಾಲೆಯ ಎಲ್ಲಾ ಶಿಕ್ಷಕರು ಮತ್ತು ಕಚೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ವೃಂದದವರು ಶ್ರೀಯತರ ಆತ್ಮ ಸದ್ಗತಿಗಾಗಿ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಮಾಡಿದರು.

Related posts

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!