20.6 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಪಕ್ಷದ ಕಚೇರಿಯಲ್ಲಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾಶ್ರೀನಿವಾಸ್ ಗೌಡ ಬೆಳಾಲು ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ವಂದೇ ಮಾತರಂ ಗೀತೆಯನ್ನು ಹಾಡಿ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಭೆ ಆರಂಭಗೊಂಡಿತು .ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲಿಖಿತ ಶೆಟ್ಟಿ ಯವರು ಆಗಮಿಸಿ ಅಹಲ್ಯ ಬಾಯಿ ಹೊಳ್ಕರ್ ಅವರ 300 ನೇ ಜನ್ಮ ಶತಾಬ್ದಿಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು, ಹಾಗೂ ಫೆ. 23ರಿಂದ 29 ರೊಳಗೆ ಸಾಮರಸ್ಯ ಕಾರ್ಯಕ್ರಮದಡಿಯಲ್ಲಿ ಶಕ್ತಿಕೇಂದ್ರವಾರು ಪ್ರಮುಖರು ಒಂದು ಕುಟುಂಬವನ್ನು ತಮ್ಮ ಮನೆಗೆ ಕರೆದು ಸಹಭೋಜನವನ್ನು ಮಾಡಬೇಕು ಎಂದು ಹೇಳಿದರು.

ಹಾಗೆಯೇ ಉಪಸ್ಥಿತರಿದ್ದ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರು ಹಾಗೂ ಬೆಳ್ತಂಗಡಿ ಮಹಿಳಾ ಮೋರ್ಚಾ ಪ್ರಭಾರಿ ಶ್ರೀಮತಿ ಬಬಿತ ಇವರು ಮಹಿಳಾ ಮೋರ್ಚಾದಲ್ಲಿ ನಡೆಯುವ ಕಾರ್ಯವೈಖರಿಯ ಬಗ್ಗೆ ಶ್ಲಾಘನೀಯ ಮಾತುಗಳನ್ನಾಡಿದರು ಮತ್ತು ಸಮಯ ಪಾಲನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ತಿಳಿಸಿದರು. ಜಿಲ್ಲಾ ಭಾಜಪಾ ಕಾರ್ಯದರ್ಶಿ ಶ್ರೀಮತಿ ವಸಂತಿ ಮಚ್ಚಿನ, ಬೆಳ್ತಂಗಡಿ ಮಂಡಲ ಪ್ರಧಾನಕಾರ್ಯದರ್ಶಿ ಹಾಗೂ ಮಹಿಳಾ ಮೋರ್ಚಾದ ಮಂಡಲ ಪ್ರಭಾರಿ ಜಯಾನಂದ ಗೌಡ ಸಮಾಯೋಚಿತವಾಗಿ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕಿಯಾಗಿ ಆಯ್ಕೆಯಾದ ರೈತ ಮೋರ್ಚಾದ ಸದಸ್ಯೆಯಾದ ಅಶ್ವಿನಿ ಹೆಬ್ಬಾರ್, ಉಜಿರೆ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷೆಯಾಗಿ ಆಯ್ಕೆಯಾದ ಮಹಿಳಾ ಮೋರ್ಚಾ ಕಾರ್ಯದರ್ಶಿಯಾದ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಜಿರೆ, ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿಂದುಳಿದ ಮೋರ್ಚಾ ಸದಸ್ಯೆ ಆದ ಪ್ರಮೀಳಾ ಉಜಿರೆ, ಬೆಳ್ತಂಗಡಿ ಜೆ ಸಿ ಐ ಅಧ್ಯಕ್ಷರಾಗಿ ಆಯ್ಕೆಯಾದ ಮಹಿಳಾ ಮೋರ್ಚಾ ಸದಸ್ಯೆಯಾದ ಆಶಾಲತ ಇವರುಗಳನ್ನು ಅಭಿನಂದಿಸಿದಲಾಯಿತು.

ಸಭೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು. ಮಂಡಲ ಮಹಿಳಾ ಮೋರ್ಚಾದ ಪ್ರಧಾನಕಾರ್ಯದರ್ಶಿಯಾದ ಶ್ರೀಮತಿ ಪೂರ್ಣಿಮಾ ಜಯಂತ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ನಿರೂಪಿಸಿ , ಶ್ರೀಮತಿ ಚಂಚಲಾಕ್ಷಿ ಧನ್ಯವಾದವಿತ್ತರು.

Related posts

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya
error: Content is protected !!