ಶಿಬಾಜೆ : ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟ ಶಿಬಾಜೆ ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ರಾಜೀವಗಾಂಧಿ ಸೇವಾ ಕೇಂದ್ರ ಪೆರ್ಲದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಕನ್ಯಾರವರ ಅಧ್ಯಕ್ಷತೆಯಲ್ಲಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾರವರ ಉಪಸ್ಥಿತಿಯಲ್ಲಿ ಮತ್ತು ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಯಿತು.

ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂಚಾಯತ್ ಉಪಾಧ್ಯಕ್ಷ ದಿನಕರ್ ಕುರುಪ್ ರವರು ಪ್ರಸ್ತಾವಿಕ ಮಾತುಗಳನ್ನಾಡಿ, ಶಿಬಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ಸಂಜೀವಿನಿ ಒಕ್ಕೂಟದ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ, ಎಮ್.ಬಿ.ಕೆ ಹಾಗೂ ಎಲ್.ಸಿ ಆರ್ ಪಿ ಗಳ ಗೌರವ ಧನ ಹೆಚ್ಚಳದ ಬಗ್ಗೆ ಪಂಚಾಯತ್ ನಿರ್ಣಯದ ಮೂಲಕ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.
ಎಲ್.ಸಿ ಆರ್ ಪಿ ಗೀತಾರವರು ಸ್ವಾಗತಿಸಿದರು. ಒಂದು ವರ್ಷದ ವಾರ್ಷಿಕ ವರದಿಯನ್ನು ಪಶುಸಖಿ ದಿವ್ಯಾರವರು ಮಂಡಿಸಿ ಅನುಮೋದನೆ ಪಡೆಯಲಾಯಿತು. ವಾರ್ಷಿಕ ಲೆಕ್ಕ ಪರಿಶೋಧನೆಯ ವರದಿಯನ್ನು ಕೃಷಿ ಸಖಿ ಜಯಂತಿಯವರು ಮಂಡಿಸಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಸಂಜೀವಿನಿಯ ಧ್ಯೇಯ-ಉದ್ದೇಶ-ಜವಾಬ್ದಾರಿ ಹಾಗೂ ಕಾರ್ಯವೈಖರಿಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮಾತನಾಡಿ ಬಟ್ಟೆ ಚೀಲ ತಯಾರಿಸುವ ಬಗ್ಗೆ ಮಾಹಿತಿ ನೀಡಿದರು.