36.4 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 11 ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದರು, ಆದರೆ ಸಹಕಾರಿ ಸಂಘದ 2 ಮಹಾಸಭೆಗೆ ಗೈರು ಹಾಜರಾದ ಸಂಘದ ಸದಸ್ಯರಿಗೆ ಸಹಕಾರಿ ಸಂಘದ ನಿಯಮದಂತೆ ಸಂಘದ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಇಲ್ಲ. ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್‌ಪಿಟಿಷನ್ ಇದ್ದುದರಿಂದ ಚುನಾವಣಾಧಿಕಾರಿಗಳು ಸಹಕಾರಿ ಸಂಘದ ಚುನಾವಣೆಯ ಫಲಿತಾಂಶವನ್ನು ಘೋಷಣೆ ಮಾಡದೆ ತಡೆ ಹಿಡಿದಿದ್ದರು.

ಇದೀಗ ಹೈಕೋರ್ಟು ಅಂತಿಮ ಆದೇಶವನ್ನು ಮಾಡಿದ್ದು, ಇದರಿಂದಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ನಿರ್ದೇಶಕರು ಚುನಾಯಿತರಾಗಿದ್ದಾರೆ ಎಂದು ಕೋರ್ಟ್ ಆದೇಶ ನೀಡಿದೆ.

ನಿರ್ದೆಶಕರಾಗಿ ಆಯ್ಕೆಯಾದವರು : ರಾಘವೇಂದ್ರ ನಾಯಕ್ , ಕೊರಗಪ್ಪ ಗೌಡ, ರತೀಶ್ ಬಿ, ರಾಜು ಕೆ., ವರದಶಂಕರ ದಾಮ್ಲೆ, ಧರ್ಮರಾಜ್ ಎ, ಶ್ರೀಮತಿ ಗಂಗಾವತಿ, ಶ್ರೀಮತಿ ತಾರಾ, ಶ್ರೀಮತಿ ಬೇಬಿ, ನಾಗೇಶ್ ಟಿ. ಬೇಬಿ ಕಿರಣ್, ಕೃಷ್ಣಪ್ಪ ಗೌಡ

Related posts

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya
error: Content is protected !!