April 19, 2025
Uncategorized

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಫೆ.15ರಂದು ನಡೆಯಿತು.

ವೀಕ್ಷಕರಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ನೌರಿನ್ ಆಲಂಪಾಡಿ, ಜಿಲ್ಲಾ ಉಪಾಧ್ಯಕ್ಷೆ ಝಹನಾ ಬಂಟ್ವಾಳ ಹಾಗೂ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷೆ ಶಮಾ ಉಜಿರೆ ಆಗಮಿಸಿದ್ದರು. ಬೆಳ್ತಂಗಡಿ ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು ಬ್ಲಾಕ್ ಸಮಿತಿಗಳಿಗೆ ಸೂಚಿಸಲಾಯಿತು. ಕೆಲವು ಪ್ರಮುಖ ನಿರ್ಣಯಗಳನ್ನು ಈ ಕೆಳಗಿನಂತೆ ಕೈಗೊಳ್ಳಲಾಯಿತು.

ಧರ್ಮಸ್ಥಳ – ಮಂಗಳೂರು ಹೆಚ್ಚುವರಿ ರಾಜ್ಯ ಸಾರಿಗೆ ವೇಗದೂತ ಬಸ್ ಗಾಗಿ ಬೇಡಿಕೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆ ಏರಿಸುವ ಬಗ್ಗೆ ಅಧಿಕಾರಗಳ ಭೇಟಿಮಾಡಿ ಮನವಿ ಮಾಡುವುದರ ಬಗ್ಗೆ ಚರ್ಚಿಸಲಾಯಿತು. ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್‌ ಚುನಾವಣೆಯ ಕುರಿತು ಹಾಗೂ ಪಕ್ಷದ ಸ್ಪರ್ಧೆಯ ಕುರಿತು ಸಮಗ್ರವಾಗಿ ಚರ್ಚಿಸಿ ಕಾರ್ಯಯೋಜನೆ ರೂಪಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಕಾರ್ಯದರ್ಶಿ ಅಶ್ವಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಸಹಲ್ ನಿರ್ಸಾಲ್, ಅಶ್ರಫ್ ಕಟ್ಟೆ ಹಾಗೂ ಬ್ಲಾಕ್ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya
error: Content is protected !!