April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಫೆ.15ರಂದು ನಡೆಯಿತು.

ವೀಕ್ಷಕರಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ನೌರಿನ್ ಆಲಂಪಾಡಿ, ಜಿಲ್ಲಾ ಉಪಾಧ್ಯಕ್ಷೆ ಝಹನಾ ಬಂಟ್ವಾಳ ಹಾಗೂ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷೆ ಶಮಾ ಉಜಿರೆ ಆಗಮಿಸಿದ್ದರು.

ಬೆಳ್ತಂಗಡಿ ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು ಬ್ಲಾಕ್ ಸಮಿತಿಗಳಿಗೆ ಸೂಚಿಸಲಾಯಿತು. ಕೆಲವು ಪ್ರಮುಖ ನಿರ್ಣಯಗಳನ್ನು ಈ ಕೆಳಗಿನಂತೆ ಕೈಗೊಳ್ಳಲಾಯಿತು.

ಧರ್ಮಸ್ಥಳ – ಮಂಗಳೂರು ಹೆಚ್ಚುವರಿ ರಾಜ್ಯ ಸಾರಿಗೆ ವೇಗದೂತ ಬಸ್ ಗಾಗಿ ಬೇಡಿಕೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆ ಏರಿಸುವ ಬಗ್ಗೆ ಅಧಿಕಾರಗಳ ಭೇಟಿಮಾಡಿ ಮನವಿ ಮಾಡುವುದರ ಬಗ್ಗೆ ಚರ್ಚಿಸಲಾಯಿತು. ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್‌ ಚುನಾವಣೆಯ ಕುರಿತು ಹಾಗೂ ಪಕ್ಷದ ಸ್ಪರ್ಧೆಯ ಕುರಿತು ಸಮಗ್ರವಾಗಿ ಚರ್ಚಿಸಿ ಕಾರ್ಯಯೋಜನೆ ರೂಪಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಕಾರ್ಯದರ್ಶಿ ಅಶ್ವಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಸಹಲ್ ನಿರ್ಸಾಲ್, ಅಶ್ರಫ್ ಕಟ್ಟೆ ಹಾಗೂ ಬ್ಲಾಕ್ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya
error: Content is protected !!