
ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.

ಕಳೆದ ಹಲವು ಸಮಯದಿಂದ ಇಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದು ಈ ಬಗ್ಗೆ ದೂರುಗಳು ಕೇಳಿ ಬಂದಿದ್ದವು ಈ ಹಿನ್ನಲೆಯಲ್ಲಿ ಪೊಲೀಸರು ಇಲ್ಲಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಇಬ್ಬರು ಆರೋಪಿಗಳಾದ ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ ಕರೀಂ(34) ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಅನ್ವರ್ ಎಂಬಾತನಿಗೆ ಸೇರಿದ ಜಾಗದಲ್ಲಿ ಅನಧಿಕೃತ ಕಸಾಯಿಖಾನೆ ನಡೆಯುತ್ತಿತ್ತು.


ಆರೋಪಿಗಳಿಬ್ಬರು ಸೇರಿ ದನವನ್ನು ವಧೆ ಮಾಡಿ ಮಾಂಸ ತಯಾರಿಸುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು. ಸ್ಥಳದಲ್ಲಿ ಸುಮಾರು 85 ಕೆ.ಜಿ ದನದ ಮಾಂಸ ಪತ್ತೆಯಾಗಿದೆ ಸ್ಥಳದಿಂದ ಒಂದು ಬೊಲೆರೋ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಸ್ಥಳಕ್ಕೆ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ರವಿ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ ಇನ್ಸೆಕ್ಟರ್ ಸುಬ್ಬಪುರ್ ಮಠ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸೆಕ್ಟರ್ ಯಲ್ಲಪ್ಪ. ಹೆಚ್.ಎಮ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬೆನ್ನಚ್ಚನ್, ಪ್ರಮೋದ್ ನಾಯ್ಕ, ವಿಶ್ವನಾಥ್, ಜಗದೀಶ್ ಅತ್ತಾಜೆ, ಚರಣ್ ರಾಜ್, ಶಿವರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.