34.6 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ


ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಫೆ.16 ರಂದು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದೇವಳ ಪಾರುಪತ್ಯಗಾರ್ ಶ್ರೀ ಲಕ್ಷ್ಮೀ ನಾರಾಯಾಣ ರಾವ್,  ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯಪ್ರಸಾದ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ, ಸಂತೋಷ್ ಗೌಡ, ಶಿವರಾಮ್, ಶ್ರೀಮತಿ ಪವಿತ್ರ, ಶ್ರೀಮತಿ ಭವಾನಿ, ಶ್ರೀಮತಿ ಮಂಜುಳಾ ಉಪಸ್ಥಿತರಿದ್ದರು.


ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ  ನಿರ್ವಹಿಸಲಿದ್ದು, ಈ ಸಮಾರಂಭದಲ್ಲಿ ಮದುವೆಯಾಗಲಿಚ್ಛಿಸುವವರು ಏಪ್ರಿಲ್ 25 ರೊಳಗೆ ಹೆಸರು ನೋಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 0825626644, 9663464648, 8147263422

Related posts

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya
error: Content is protected !!