36.4 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಫೆ. 16ರಂದು ಶ್ರೀ ಗುರುನಾರಾಯಣ ಸ್ವಾಮಿ ಸಂಘದ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಕಾರ್ಯಕ್ರಮ ಉದ್ಘಾಟಿಸಿದರು.

ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ನೂತನ ಅಧ್ಯಕ್ಷ ಗುರುರಾಜ್ ಗುರಿಪಳ್ಳ ತಂಡಕ್ಕೆ ಪದಪ್ರಧಾನ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನಾದ ಅಧ್ಯಕ್ಷ ಸಂಪತ್ ಪಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಅರುಣ್ ಮಾಂಜ, ಬೆಳ್ತಂಗಡಿ ಯುವ ವಾಹಿನಿ ಮಹಿಳಾ ಸಂಚಲನ ಸಮಿತಿಯ ಅಧ್ಯಕ್ಷೆ ಲೀಲಾವತಿ ಕೆ. ಉಪಸ್ಥಿತರಿದ್ದರು. ಯುವವಾಹಿನಿ ಬೆಳ್ತಂಗಡಿ ಘಟಕದ ಮಾಜಿ ಅಧ್ಯಕ್ಷ ಅಶ್ವಥ್ ಕುಮಾ‌ರ್ ಚುನಾವಣಾಧಿಕಾರಿಯಾಗಿ ನೂತನ ಪದಾಧಿಕಾರಿಗಳ ವಿವರ ಪ್ರಸ್ತಾಪಿಸಿದರು.

ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ. ಕೆ. ಪ್ರಸಾದ್ ಸ್ವಾಗತಿಸಿದರು. ಯುವವಾಹಿನಿ ಬೆಳ್ತಂಗಡಿ ಘಟಕದ ಕಾರ್ಯದರ್ಶಿ ಯಶೋಧರ ಮುಂಡಾಜೆ ವರದಿ ವಾಚಿಸಿದರು. ಯುವ ವಾಹಿನಿ ಬೆಳ್ತಂಗಡಿ ಘಟಕದ ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶಕರು, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶಕರು, ನಿರ್ದೇಶಕರು, ಸಮಾಜ ಭಾಂದವರು ಹಾಜರಿದ್ದರು. ಸುಧಾ ಆರ್. ಕಾರ್ಯಕ್ರಮ ನಿರೂಪಿಸಿದರು. ಮಾಜಿ ಅಧ್ಯಕ್ಷೆ ಸುಜಾತಾ ಅಣ್ಣಿ ಪೂಜಾರಿ ಸನ್ಮಾನಿತರ ಪರಿಚಯಿಸಿದರು.

ಯುವವಾಹಿನಿ ಸಾಧನಾ ಶ್ರೀ ಪುರಸ್ಕಾರ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಲಾಯಿಲ, ಬ್ರಹ್ಮ ಶ್ರೀ ಗುರುನಾರಾಯಣ ಗುರು ಸೇವಾ ಸಂಘ ಬಳಂಜ, ಅಂತರಾಷ್ಟ್ರೀಯ ಕರಾಟೆ ಪಟು ಶ್ರೇಯಸ್ ಪೂಜಾರಿ ಇವರನ್ನು ಗೌರವಿಸಲಾಯಿತು. ಹಾಗೂ ಪ್ರತಿಭಾ ಪುರಸ್ಕಾರ ವಿದ್ಯಾನಿಧಿ, ಸಾಂತ್ವನ ನಿಧಿ ವಿತರಿಸಲಾಯಿತು. ನೂತನ ಕಾರ್ಯದರ್ಶಿ ಮಧುರ ರಾಘವ ವಂದಿಸಿದರು.

Related posts

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya
error: Content is protected !!