ಕಳಿಯ: ಇಲ್ಲಿಯ ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವವು ಫೆ.17ರಂದು ನಡೆಯಿತು.
ಬೆಳಿಗ್ಗೆ ನಾಗತಂಬಿಲ ಸೇವೆ, ಭಜನಾ ಕಾರ್ಯಕ್ರಮ, ಆಶ್ಲೇಷಾ ಬಲಿ ಸೇವೆ’, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ ಮತ್ತು ಪದಾಧಿಕಾರಿಗಳು, ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ, ಊರವರು ಉಪಸ್ಥಿತರಿದ್ದರು.