ಬೆಳ್ತಂಗಡಿ : ಗುರುವಾಯನಕೆರೆಯಿಂದ ಉಪ್ಪಿನಂಗಡಿ ತನಕದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ತೀರಾ ಹದಗೆಟ್ಟು ಹೋಗಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ.
ರಸ್ತೆಯಲ್ಲಿ ಅಲ್ಲಲ್ಲಿ ಹೊಂಡ-ಗುಂಡಿಗಳು ನಿರ್ಮಾಣವಾಗಿ ಪ್ರತಿ ನಿತ್ಯ ಪ್ರಯಾಣಿಸುವ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇತ್ತಿಚೇಗೆ ಅಲ್ಲಲ್ಲಿ ಕಾಟಾಚಾರಕ್ಕೆ ತೇಪೆ ಕಾರ್ಯ ನಡೆದಿದ್ದು, ಗುಂಡಿಗಳಿಗೆ ಕೇವಲ ಜಲ್ಲಿ ಕಲ್ಲು ಹಾಕಿದ್ದು ಅದು ಎದ್ದು ಹೋಗಿ ರಸ್ತೆಯಲ್ಲಿ ಹರಡಿಕೊಂಡಿದೆ. ಕೆಲವು ಕಡೆಗಳಲ್ಲಿ ನಾಗರಿಕರೇ ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ ಸಂಚಾರಕ್ಕೆ ತಕ್ಕ ಮಟ್ಟಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ರಸ್ತೆ ಅಭಿವೃದ್ಧಿಗೆ ರೂ.6 ಕೋಟಿ: ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮನವಿ ಮೇರೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಕೇಂದ್ರ ಸರ್ಕಾರದ ಜೊತೆ ಮಾತನಾಡಿ, ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯಿಂದ
ರಸ್ತೆ ಅಭಿವೃದ್ಧಿಗೆ ರೂ.6 ಕೋಟಿ ಅನುದಾನವನ್ನು ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದರ ಶಿಲಾನ್ಯಾಸ ಕಾರ್ಯಕ್ರಮ ನಾಳೆ ಫೆ.18ರಂದು ಪೂರ್ವಾಹ್ನ:9.30 ಕ್ಕೆ ಗುರುವಾಯನಕೆರೆಯ ಕುಲಾಲ ಮಂದಿರದ ಬಳಿ ನಡೆಯಲಿದೆ. ಶಿಲಾನ್ಯಶವನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ನೆರವೇರಿಸಲಿದ್ದು, ತಾಲೂಕಿನ ಜನಪ್ರಿಯ ಶಾಸಕರಾದ ಹರೀಶ್ ಪೂಂಜರವರು ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾಮ ಪಂಚಾಯತುಗಳು ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಂಘ-ಸಂಸ್ಥೆಯವರು, ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ.