September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ


ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಫೆ.16 ರಂದು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದೇವಳ ಪಾರುಪತ್ಯಗಾರ್ ಶ್ರೀ ಲಕ್ಷ್ಮೀ ನಾರಾಯಾಣ ರಾವ್,  ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯಪ್ರಸಾದ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ, ಸಂತೋಷ್ ಗೌಡ, ಶಿವರಾಮ್, ಶ್ರೀಮತಿ ಪವಿತ್ರ, ಶ್ರೀಮತಿ ಭವಾನಿ, ಶ್ರೀಮತಿ ಮಂಜುಳಾ ಉಪಸ್ಥಿತರಿದ್ದರು.


ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ  ನಿರ್ವಹಿಸಲಿದ್ದು, ಈ ಸಮಾರಂಭದಲ್ಲಿ ಮದುವೆಯಾಗಲಿಚ್ಛಿಸುವವರು ಏಪ್ರಿಲ್ 25 ರೊಳಗೆ ಹೆಸರು ನೋಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 0825626644, 9663464648, 8147263422

Related posts

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಉಜಿರೆ ಟೌನ್‌ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸಾದಲ್ಲಿ ಹಮ್ರಾ ವರ್’ದ ಬಾಲ ಮಾಸಿಕ ಚಂದಾ ಅಭಿಯಾನಕ್ಕೆ ಚಾಲನೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

Suddi Udaya
error: Content is protected !!