36.4 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

ಅಳದಂಗಡಿ: ಗ್ರಾಮ ಸಭೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸದೆ ಇರುವುದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾದ ಘಟನೆ ಅಳದಂಗಡಿ ಗ್ರಾಮ ಸಭೆಯಲ್ಲಿ ನಡೆಯಿತು.


ಅಳದಂಗಡಿ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.18 ರಂದು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.

ಅಧಿಕಾರಿಗಳು ನಮ್ಮನ್ನು ಅಸಡ್ಡೆ ಭಾವದಿಂದ ತೋರುತ್ತಿದ್ದಾರೆ. ಸಭೆಯಲ್ಲಿ ಇಲಾಖೆ ಮಾಹಿತಿ ಕೇಳಲು ಅಧಿಕಾರಿಗಳು ಇಲ್ಲ. ನಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಎಲ್ಲಿ. ಇಲಾಖೆ ಹೋದರೆ ಅಲ್ಲಿ ಅಧಿಕಾರಿಗಳು ಸಿಗುವುದಿಲ್ಲ. ಕೃಷಿ ಭೂಮಿಯಲ್ಲಿ ರೋಗಗಳು ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಕೇಳಲು ಕೃಷಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿಯೇ ಇಲ್ಲ ಎಂದು ಗ್ರಾಮಸ್ಥರು ತಮ್ಮ ನೋವುನ್ನು ತೋಡಿಕೊಂಡರು. ಎಲ್ಲಾ ಇಲಾಖೆಗಳಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ಇಲ್ಲ. ಸಮಸ್ಯೆಯನ್ನು ತಿಳಿಸಿ ಸಂಬಂಧ ಪಟ್ಟ ಇಲಾಖೆಗಳಿಗೆ ಪತ್ರ ಬರೆದು ಕಳುಹಿಸಲಾಗುವುದು ಎಂದು ಮಾರ್ಗದರ್ಶಿ ಅಧಿಕಾರಿ ಚಂದ್ರಶೇಖರ್ ತಿಳಿಸಿದರು.

ಉಪಾಧ್ಯಕ್ಷೆ ಶಾಲಿನಿ, ಸದಸ್ಯರಾದ ಸೌಮ್ಯ, ಪ್ರಶಾಂತ್ ವೇಗಸ್, ರೂಪಾಶ್ರೀ, ಗೀತಾ, ಲಲಿತಾ, ಅಬ್ದುಲ್ ಖಾದರ್, ರವಿ ಪೂಜಾರಿ, ಕೃಷ್ಣಪ್ಪ ಪೂಜಾರಿ, ಹರೀಶ ಹಾಗೂ ಪ್ರವೀಣ, ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು , ಸಂಜೀವಿನಿ ಒಕ್ಕೂಟದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಪಿಡಿಓ ಪೂರ್ಣಿಮಾ ಸ್ವಾಗತಿಸಿದರು.

Related posts

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya
error: Content is protected !!