April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ನೀಡಿದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು 12 ಕಿಲೋಮೀಟರ್ ರಸ್ತೆಯು ತೀರ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ.ಮತ್ತು ಈ ರಸ್ತೆಯು ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳನ್ನು ಸಂಪರ್ಕಿಸುವ ರಸ್ತೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್, ಕೆ. ಕೆ ಸಾಹುಲ್ ಅಮೀದ್, ಜಯ ವಿಕ್ರಂ, ಇಸುಬು ಇಲಂತಿಲ, ಬಾಲಕೃಷ್ಣ ಶೆಟ್ಟಿ, ಅಯೂಬ್ ಉಪಸ್ಥಿತರಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!