ಅಳದಂಗಡಿ: ಗ್ರಾಮ ಸಭೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸದೆ ಇರುವುದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾದ ಘಟನೆ ಅಳದಂಗಡಿ ಗ್ರಾಮ ಸಭೆಯಲ್ಲಿ ನಡೆಯಿತು.
ಅಳದಂಗಡಿ ಗ್ರಾಮ ಪಂಚಾಯತ್ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.18 ರಂದು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.
ಅಧಿಕಾರಿಗಳು ನಮ್ಮನ್ನು ಅಸಡ್ಡೆ ಭಾವದಿಂದ ತೋರುತ್ತಿದ್ದಾರೆ. ಸಭೆಯಲ್ಲಿ ಇಲಾಖೆ ಮಾಹಿತಿ ಕೇಳಲು ಅಧಿಕಾರಿಗಳು ಇಲ್ಲ. ನಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಎಲ್ಲಿ. ಇಲಾಖೆ ಹೋದರೆ ಅಲ್ಲಿ ಅಧಿಕಾರಿಗಳು ಸಿಗುವುದಿಲ್ಲ. ಕೃಷಿ ಭೂಮಿಯಲ್ಲಿ ರೋಗಗಳು ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಕೇಳಲು ಕೃಷಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿಯೇ ಇಲ್ಲ ಎಂದು ಗ್ರಾಮಸ್ಥರು ತಮ್ಮ ನೋವುನ್ನು ತೋಡಿಕೊಂಡರು. ಎಲ್ಲಾ ಇಲಾಖೆಗಳಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ಇಲ್ಲ. ಸಮಸ್ಯೆಯನ್ನು ತಿಳಿಸಿ ಸಂಬಂಧ ಪಟ್ಟ ಇಲಾಖೆಗಳಿಗೆ ಪತ್ರ ಬರೆದು ಕಳುಹಿಸಲಾಗುವುದು ಎಂದು ಮಾರ್ಗದರ್ಶಿ ಅಧಿಕಾರಿ ಚಂದ್ರಶೇಖರ್ ತಿಳಿಸಿದರು.
ಉಪಾಧ್ಯಕ್ಷೆ ಶಾಲಿನಿ, ಸದಸ್ಯರಾದ ಸೌಮ್ಯ, ಪ್ರಶಾಂತ್ ವೇಗಸ್, ರೂಪಾಶ್ರೀ, ಗೀತಾ, ಲಲಿತಾ, ಅಬ್ದುಲ್ ಖಾದರ್, ರವಿ ಪೂಜಾರಿ, ಕೃಷ್ಣಪ್ಪ ಪೂಜಾರಿ, ಹರೀಶ ಹಾಗೂ ಪ್ರವೀಣ, ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು , ಸಂಜೀವಿನಿ ಒಕ್ಕೂಟದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಪಿಡಿಓ ಪೂರ್ಣಿಮಾ ಸ್ವಾಗತಿಸಿದರು.