ಬೆಳ್ತಂಗಡಿ ಕುತ್ಯಾರು ಫ್ರೆಂಡ್ಸ್ ಪ್ರಾಯೋಜಕತ್ವದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ಸಹಕಾರದೊಂದಿಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ಕರಾವಳಿಯ ಪ್ರಸಿದ್ಧ ಗಾಯಕರ ಕೂಡುವಿಕೆಯಿಂದ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್ ಕಾರ್ಯಕ್ರಮವು ಫೆ.19 ರಂದು ರಾತ್ರಿ ಅಯ್ಯಪ್ಪ ದೇವಸ್ಥಾನದ ಮುಂಭಾಗ, ಸಂತೆಕಟ್ಟೆ-ಬೆಳ್ತಂಗಡಿ ನಡೆಯಲಿದೆ.

ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ. ಉದ್ಘಾಟನೆಯನ್ನು ಕಿರಣ್ ಚಂದ್ರ ಡಿ ಪುಷ್ಪಗಿರಿ, ಯುವ ಉದ್ಯಮಿ ಬೆಂಗಳೂರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕರು ಮೋಹನ್ ಕುಮಾರ್, ಎಕ್ಸೆಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ, ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನ ಆಡಳಿತ ಮೊಕ್ತೇಸರರು ಶಿವಪ್ರಸಾದ್ ಅಜಿಲ , ಪ. ಪಂ. ಅಧ್ಯಕ್ಷ ಜಯಾನಂದ ಗೌಡ ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.