21 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

ಕಲ್ಲೇರಿ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಒಂದು ತಿಂಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಫೆ 17 ರಂದು ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ರೈ ತರಬೇತಿ ಉದ್ಘಾಟಿಸಿದರು. ಭಾಗವಹಿಸಿದ ಮಹಿಳೆಯರಿಗೆ ಬಹಳ ನಾಜುಕಾದ ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದು ಮಹಿಳೆಯರು ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು. ಅದೇ ರೀತಿ ತರಬೇತಿ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗೇರುಕಟ್ಟೆ ಟೈಲರ್ ಒಕ್ಕೂಟದ ಅಧ್ಯಕ್ಷ ಉಮೇಶ್ ಶೆಟ್ಟಿ ಇವರು ಕಸೂತಿ ಕೆಲಸದ ಮಹತ್ವ ವಿವರಿಸಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ ತರಬೇತಿಯ ನಿಯಮಗಳ ಬಗ್ಗೆ ವಿವರಿಸಿ ಮಹಿಳೆಯರಿಗೆ ಶುಭ ಕೋರಿದರು. ತರಬೇತುದಾರರಾದ ಶುಭಲತಾ , ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು.

ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 25 ಮಹಿಳೆಯರು ಒಂದು ತಿಂಗಳ ತರಬೇತಿ ಪಡೆಯಲಿದ್ದಾರೆ.

Related posts

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!